ಬೀದರಿನ ವಿಶ್ವ ಕನ್ನಡಿಗರ ಸಂಸ್ಥೆವತಿಯಿಂದ ಸಂಸ್ಥೇಯ ೭ನೇ ವಾರ್ಷಿಕೋತ್ಸವ ನಿಮಿತ್ತ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ ಇತ್ತೀಚಿಗೆ ಬೀದರಿನ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ಶೆಣೈಯವರ ನಾಲ್ಕು ದಶಕದ ಸಾಧನೆಯನ್ನು ಗುರುತಿಸಿ ಕರ್ನಾಟಕ ಕಾಯಕ ರತ್ನ ರಾಷ್ಟ್ರೀಯ ಸದ್ಭಾವನ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಬೀದರಿನ ವಿಶ್ವ ಕನ್ನಡಿಗರ ಸಂಸ್ಥೆಯ ಸಂಸ್ಥಾಪಕರಾದ ಡಾ. ಸುಬ್ಬಣ್ಣ ಕರಕನಹಳ್ಳಿ, ಬೆಂಗಳೂರಿನ ಕರ್ನಾಟಕ ಪರ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ. ವಿಶ್ವನಾಥ್ ಜಿ.ಪಿ. ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಕಲಬುರಗಿಯ ವೀರ ಕನ್ನಡ ಸೇನೆ ರಾಜ್ಯಾಧ್ಯಕ್ಷರಾದ ಅಮೃತ ಪಾಟೀಲ್ ಸಿರನೂರು ಮುಂತಾದ ಗಣ್ಯಮಾನ್ಯರು ಉಪಸ್ಥಿತರಿದ್ದರು.
ಬೀದರ್ ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಉಚಿತ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಶಿಕ್ಷಕರ, ಪೋಷಕರ, ಶಿಕ್ಷಣ ಇಲಾಖೆಯ ಅಧಿಕಾರಿಗಳ ಅನುಮತಿ ಪಡೆದು ಮಕ್ಕಳಿಗೆ ಪ್ರತಿಜ್ಞಾ ವಿಧಿಯನ್ನು ಶೆಣೈಯವರು ಬೋಧನೆ ಮಾಡಿದರು.

